ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಮಾನತುಗೊಳ್ಳುವ ಮೂಲಕ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದ ಶಾಸಕ ಬಿ.ಕೆ. ಸಂಗಮೇಶ್ವರ್, ಇದೀಗ ಸೋಮವಾರದಿಂದ ಆರಂಭಗೊಂಡಿರುವ ಅಧಿವೇಶನದಲ್ಲೂ ರಾಜ್ಯದ ಗಮನ ಸೆಳೆದಿದ್ದಾರೆ.
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಧಾನಸೌಧ ಮುತ್ತಿಗೆ ಪ್ರತಿಭಟನೆಯಲ್ಲಿ ವಿಧಾನಸೌಧದ ಗೇಟ್ ತಳ್ಳುತ್ತಿರುವ ಪೋಟೋ ಇದೀಗ ಎಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಮ್ಮ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ದೌರ್ಜನ್ಯ ಖಂಡಿಸಿ ವಿಧಾನಸಭೆ ಅಧಿವೇಶನದಲ್ಲಿಯೇ ಸಭಾಧ್ಯಕ್ಷರ ಎದುರು ಅಂಗಿ ಕಳಚಿ ವಿವಾದಕ್ಕೆ ಒಳಗಾಗುವ ಮೂಲಕ ಕೆಲವು ದಿನಗಳವರೆಗೆ ಅಧಿವೇಶನದಿಂದ ಅಮಾನತುಗೊಂಡಿದ್ದರು. ಈ ಘಟನೆ ಸುದ್ದಿಯಾಗುವ ಮೂಲಕ ರಾಜ್ಯಮಟ್ಟದಲ್ಲಿ ಎಲ್ಲರ ಗಮನ ಸೆಳೆದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post