ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಭಾರತ ರತ್ನ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ತಮ್ಮ ಸುಮಧುರ ಕಂಠದಿಂದ ಸುಮಾರು 36 ಭಾಷೆಗಳಲ್ಲಿ ಹಾಡಿರುವ ಅವರು ಎಲ್ಲಾ ಭಾಷಿಗರ ಮಸೂರೆಗೊಂಡಿದ್ದಾರೆ.
ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಗೌರವಕ್ಕೆ ಪಾತ್ರರಾಗಿದ್ದ ಲತಾ ಮಂಗೇಶ್ಕರ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮೃತರಿಗೆ ಅಂತಿಮ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ನೋಟಿನ ಮೂಲಕ ಸಂತಾಪ :
10 ರೂ. ಮುಖಬೆಲೆಯ ಲತಾ ಮಂಗೇಶ್ಕರ್ ಅವರ ಜನ್ಮ ಮತ್ತು ಮರಣ ದಿನಾಂಕ ಒಳಗೊಂಡಿರುವ ನೋಟನ್ನು ಸಮರ್ಪಿಸುವ ಮೂಲಕ ಜನ್ನಾಪುರದ ಗಣೇಶ್ ವಿಭಿನ್ನ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ.
ಹವ್ಯಾಸಿ ಅಂಚೆ ಚೀಟಿ, ನೋಟು, ನಾಣ್ಯ ಸಂಗ್ರಹಗಾರರಾಗಿರುವ ಗಣೇಶ್, ಪ್ರತಿ ಬಾರಿ ಗಣ್ಯ ವ್ಯಕ್ತಿಗಳು ನಿಧನ ಹೊಂದಿದಾಗ ನೋಟಿನ ಮೂಲಕ ಸಂತಾಪ ಸೂಚಿಸಿ ಗಮನ ಸೆಳೆಯುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post