ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ವಯವಾಗುವಂತೆ ಕ್ಷಿಪ್ರ ಕಾರ್ಯ ಪಡೆ(ಆರ್’ಎಎಫ್) ಘಟಕ ನಗರದಲ್ಲಿ ಸ್ಥಾಪನೆಯಾಗುತ್ತಿದ್ದು, ನಾಳೆ ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದ ಸಿದ್ದತೆಯನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಇಂದು ಪರಿಶೀಲಿಸಿದರು.
ಮಿಲ್ಟ್ರಿ ಕ್ಯಾಂಪ್ ಬಳಿಯಲ್ಲಿ ನಾಳೆ ಮಧ್ಯಾಹ್ನ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆರವೇರಿಸಲಿದ್ದು, ಇಂದು ಅಂತಿಮ ಹಂತದ ಸಿದ್ದತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಇಂದು ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸಿದ್ದತೆಗಳನ್ನು ಪರಿಶೀಲಿಸಿದರು.
ಆನಂತರ ಆರ್’ಎಎಫ್ ಐಜಿ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಶಾಂತರಾಜು ಅವರುಗಳಿಂದ ಮಾಹಿತಿ ಪಡೆದು, ಕಾರ್ಯಕ್ರಮದ ಕುರಿತಾಗಿ ಚರ್ಚೆ ನಡೆಸಿದರು.










Discussion about this post