No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಶಾಸಕ ಸಂಗಮೇಶ್ವರ್ ಅವಿರತ ಪ್ರಯತ್ನ: ಭದ್ರಾವತಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್

ಜನರ ಜೀವ, ಆರೋಗ್ಯ ನಮಗೆ ಮೊದಲ ಆದ್ಯತೆ: ಇದಕ್ಕಾಗಿ ಎಂತಹ ಕೆಲಸಕ್ಕೂ ಸಿದ್ದ: ಸಂಗಮೇಶ್ವರ್

kalpa News by kalpa News
May 29, 2021
in ಭದ್ರಾವತಿ
0
ಶಾಸಕ ಸಂಗಮೇಶ್ವರ್ ಅವಿರತ ಪ್ರಯತ್ನ: ಭದ್ರಾವತಿ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಸುದ್ದಿಗೋಷ್ಟಿಯನ್ನುದ್ಧೇಶಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರಿಗಾಗಿ ಮೀಸಲಿರಿಸಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳಿಗೆ ಮಾತ್ರ ಆಕ್ಸಿಜನ್ ಸೌಲಭ್ಯವಿದ್ದು, ಇನ್ನುಳಿದ 50 ಬೆಡ್‌ಗಳಿಗೆ ತಾಲೂಕು ಆಸ್ಪತ್ರೆಯ ಆವರಣದಲ್ಲಿಯೇ ಆಕ್ಸಿಜನ್ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆ ಆವರಣದ 25*25 ಜಾಗದಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುತ್ತಿದ್ದು, ಈ ಕಾಮಗಾರಿಗೆ ಶಾಸಕರ ನಿಧಿಯಿಂದ ಹಣ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.

ಹಾಲಿ ಇರುವ 50 ಬೆಡ್‌ಗಳಿಗೆ ಆಕ್ಸಿಜನ್ ಸಾಕಾಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತಿದೆ. ಇಒ, ಪಿಡಿಒಗಳು ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಇರುವುದೇ ಸೋಂಕು ಹೆಚ್ಚಾಗಲು ಕಾರಣವಾಗಿದ್ದು, ಇವರ ವಿರುದ್ಧ ಮೇಲಾಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದರು.

ಈಗ ಸರ್ಕಾರಿ ಆಸ್ಪತ್ರೆಯಲ್ಲಿ 3 ಐಸಿಯು ಬೆಡ್ ಇದ್ದು, ಅದನ್ನು 10ಕ್ಕೆ ಏರಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಗತ್ಯ ಬಂದಲ್ಲಿ ದೇವರ ನರಸೀಪುರದಲ್ಲಿ 160 ಹಾಗೂ ದೊಡ್ಡೇರಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 100 ಬೆಡ್’ಗಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತದೆ ಎಂದರು.

ಈ ವೇಳೆ ಕಲ್ಪ ಮೀಡಿಯಾ ಹೌಸ್’ನೊಂದಿಗೆ ಮಾತನಾಡಿದ ಶಾಸಕರು, ಜನರ ಆರೋಗ್ಯ ಹಾಗೂ ಜೀವ ಅತ್ಯಂತ ಮುಖ್ಯವಾದುದು. ಇದಕ್ಕೆ ಅಗತ್ಯವಾಗಿರುವ ಎಲ್ಲ ರೀತಿಯ ತುರ್ತು ಚಿಕಿತ್ಸೆ ಹಾಗೂ ವೈದ್ಯಕೀಯ ವ್ಯವಸ್ಥೆ ಮಾಡುವುದು ನಮ್ಮ ಮೊದಲ ಆದ್ಯತೆ. ಕೋವಿಡ್ ಸೋಂಕು ಹೊಡೆದೋಡಿಸಿ, ತಾಲೂಕಿನ ಜನರ ಜೀವ ಉಳಿಸಿ, ಆರೋಗ್ಯ ಕಾಪಾಡುವ ದೃಷ್ಠಿಯಿಂದ ಎಲ್ಲ ರೀತಿಯ ಗರಿಷ್ಠ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರಸಭೆ, ತಾಲೂಕು ಆಡಳಿತ, ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಇದಕ್ಕಾಗಿ ಅವಿರತ ಶ್ರಮಿಸುತ್ತಿದೆ. ಜನರೂ ಸಹ ಇದಕ್ಕೆ ಸಹಕಾರ ನೀಡಬೇಕು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಇಇ ರವಿಕಿರಣ್ ಮಾತನಾಡಿ, ಶಾಸಕರ ಪ್ರಯತ್ನದಿಂದ ಆಸ್ಪತ್ರೆ ಹಿಂಭಾಗದಲ್ಲಿ 25*25 ವ್ಯಾಪ್ತಿಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಜಾಗ ಗುರುತಿಸಲಾಗಿದೆ. ಗಾಳಿಯಲ್ಲಿ ಪ್ರತಿ ನಿಮಿಷಕ್ಕೆ 400 ಲೀ ಆಮ್ಲಜನಕ ಉತ್ಪಾದಿಸುವ ಉದ್ದೇಶ ಹೊಂದಿದ್ದು, ಇನ್ನು 2 ವಾರದಲ್ಲಿ ಕಟ್ಟಡ ಕಾಮಗಾರಿ ಆರಂಭವಾಗಲಿದೆ. ಕಟ್ಟಡ ಕಾಮಗಾರಿಗೆ 18 ಲಕ್ಷ ಸೇರಿದಂತೆ ಒಟ್ಟು 100.3 ರೂ. ಲಕ್ಷ ವೆಚ್ಚವಾಗಲಿದೆ ಎಂದರು.
ಆಸ್ಪತ್ರೆಯ ಆವರಣದಲ್ಲೇ ಗಾಳಿಯಲ್ಲಿ ಆಕ್ಸಿಜನ್ ಉತ್ಪಾದಿಸಲಾಗುವ ಕಾರಣ ಜಂಬೋ ಸಿಲಿಂಡರ್‌ಗಳ ಅವಶ್ಯಕತೆ ಇರುವುದಿಲ್ಲ. ಪೈಪ್‌ಲೈನ್ ಮೂಲಕ ಸಪ್ಲೈ ಮಾಡಲಾಗುವುದು. ಆದರೆ ಹೊರಗಡೆ ನೀಡುವ ಅಗತ್ಯವಿದ್ದರೆ ಮಾತ್ರ ಸಿಲಿಂಡರ್ ಬೇಕಾಗಬಹುದು. ಜೂನ್ ಕೊನೆಯಲ್ಲಿ ಆಕ್ಸಿಜನ್ ಬಳಕೆಗೆ ಲಭ್ಯವಾಗಲಿದೆ ಎಂದರು.

ನಗರಸಭೆ ಅಧಿಕಾರಿ ಸುನೀತಾ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA BK SangameshwarNews in KannadaNews KannadaOxygen PlantShimogaShivamoggaShivamogga Newsಆಕ್ಸಿಜನ್ ಪ್ಲಾಂಟ್ಉಕ್ಕಿನನಗರಿಕೋವಿಡ್ಭದ್ರಾವತಿಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ತಾಲೂಕು ಕೋವಿಡ್ ನಿರ್ವಹಣೆಯಲ್ಲಿ ಪಿಡಿಒಗಳ ಕಾರ್ಯವೈಖರಿ ವಿರುದ್ಧ ಶಾಸಕರು ಗರಂ

Next Post

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

kalpa News

kalpa News

Next Post
ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

ವದಂತಿಗಳಿಗೆ ಕಿವಿಗೊಡದೆ ಉಚಿತ ಆಂಬ್ಯುಲೆನ್ಸ್ ಸೇವೆ ಉಪಯೋಗಿಸಿಕೊಳ್ಳಲು ಶಾಸಕ ಸಂಗಮೇಶ್ವರ್ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL