ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು ಹಾಗೂ ನಿವೃತ್ತ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಸಂಸದ ಬಿ.ವೈ ರಾಘವೇಂದ್ರ MP Raghavendra ಕೇಂದ್ರ ಉಕ್ಕು ಪ್ರಾಧಿಕಾರದ ಅಧ್ಯಕ್ಷೆ ರಾಧ ಸೋಮಮಂಡಲ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚಿಸಿದರು.
ತಕ್ಷಣ ಕಾರ್ಖಾನೆಗೆ ಅಗತ್ಯವಿರುವ ಬಂಡವಾಳ ತೊಡಗಿಸುವುದು, ಕಾರ್ಖಾನೆಯ ವಸತಿ ಗೃಹಗಳನ್ನು ದೀರ್ಘಾವಧಿ ಬಾಡಿಗೆಗೆ ನೀಡುವುದು, ಮೆಡಿ ಕ್ಲೈಮ್ ಇನ್ಸೂರೆನ್ಸ್ ಪಾಲಿಸಿಯಿಂದ ವಂಚಿತರಾದ ನಿವೃತ್ತ ಕಾರ್ಮಿಕರಿಗೆ ಉಪಯೋಗವಾಗುವಂತೆ ಅವಕಾಶ ಕಲ್ಪಿಸಿಕೊಡುವುದು. 33 ತಿಂಗಳ ಅವಧಿಗೆ ವಸತಿ ಗೃಹಗಳ ಕರಾರು ನವೀಕರಣಗೊಳಿಸುವುದು ಹಾಗೂ ಖಾಲಿ ಇರುವ ಸುಮಾರು 500 ವಸತಿ ಗೃಹಗಳನ್ನು ನಿವೃತ್ತ ಕಾರ್ಮಿಕರಿಗೆ ಬಾಡಿಗೆಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಂಸದರು ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದರು.
Also read: ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್: ಶಿವಮೊಗ್ಗ ಸೇರಿ ಹಲವೆಡೆ ಭಾರೀ ಮಳೆ ಮುನ್ಸೂಚನೆ
ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ. ರಾಮಲಿಂಗಯ್ಯ, ಸೈಲ್ ನಿವೃತ್ತ ಕಾರ್ಮಿಕರ ಸಂಘದ ಕೇಂದ್ರ ಒಕ್ಕೂಟದ ಉಪಾಧ್ಯಕ್ಷ ಸಿ.ಎಸ್. ನಾಗಭೂಷಣ್ ಹಾಗು ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















