ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಲಿ ಎಂದು ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರು ತಾಲೂಕಿನ ದೇವಾಲಯಗಳಲ್ಲಿ ಪ್ರಾರ್ಥಿಸಿದರು.
ಭದ್ರಾವತಿ #Bhadravathi ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ವಿವಿಧ ದೇವಾಲಯಗಳಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಂಸದರು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ. ಅವರಿಗೆ ಉತ್ತಮ ಆಯುಷ್ಯ-ಆರೋಗ್ಯ ನೀಡಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಸ್ಥಾನ ಅಲಂಕರಿಸಿ ಭಾರತ ವಿಶ್ವ ಗುರುವಾಗಲಿ ಎಂದು ಪ್ರಾರ್ಥಿಸಿದರು.

ಎಂಎಲ್’ಸಿ ರುದ್ರೇಗೌಡ, ಪ್ರಮುಖರಾದ ಜ್ಯೋತಿಪ್ರಕಾಶ್, ರಮೇಶ್ ಹೆಗ್ಡೆ, ರುದ್ರೇಶ್ ಮಂಗೋಟೆ, ಶಾರದಾ ಅಪ್ಪಾಜಿ, ಧರ್ಮಪ್ರಸಾದ್, ಶ್ರೀನಾಥ್, ರಾಮಲಿಂಗ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post