ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಡಹಬ್ಬ ದಸರಾ ಅಂಗವಾಗಿ ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ದಸರಾ ಕುಸ್ತಿ ಪಂದ್ಯಾವಳಿಗೆ ಪೌರಾಯುಕ್ತ ಎಚ್.ಎಂ. ಮನುಕುಮಾರ್ ಚಾಲನೆ ನೀಡಿದರು.
ಹಳೇನಗರ ಕನಕ ಮಂಟಪದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ಫೈಲ್ವಾನ್‌ಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು.
Also read: ಎಸ್‌ಎಐಎಲ್, ವಿಐಎಸ್‌ಎಲ್ ವತಿಯಿಂದ ಗಾಂಧಿ ಜಯಂತಿ ಆಚರಣೆ
ಈ ಬಾರಿ ದಸರಾ ಹಬ್ಬದ ವಿಶೇಷತೆಗಳಲ್ಲಿ ಕುಸ್ತಿ ಪಂದ್ಯಾವಳಿ ಸಹ ಒಂದಾಗಿದ್ದು, ದಸರಾ ಆಚರಣಾ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ನಗರಸಭೆ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















