ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಒಂದೆಡೆ ನಗರಸಭಾ ಚುನಾವಣೆ ನಗರದಲ್ಲಿ ಕಾವು ಪಡೆದುಕೊಳ್ಳುತ್ತಿದ್ದರೆ, ಹೃದಯಾಘಾತದಿಂದ ಅಭ್ಯರ್ಥಿಯೊಬ್ಬರು ನಿಧನರಾಗಿರುವ ದುಃಖಕರ ಘಟನೆ ನಡೆದಿದೆ.
ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ವಾರ್ಡ್ ನಂ. 29ರಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೃತಿ ಮಂಜುನಾಥ್ ಇಂದು ನಿಧನರಾಗಿದ್ದಾರೆ.
ಕಳೆದ ಸುಮಾರು 1 ವಾರದಿಂದ ಹೆಚ್ಚಿನ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಶೃತಿ ಮಂಜುನಾಥ್ ತುರ್ತು ಅನಾರೋಗ್ಯಕ್ಕೆ ಒಳಗಾಗಿದ್ದು, ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ನಗರದ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post