ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಹಳೇನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವ ಪ್ರಕರಣ ವರದಿಯಾಗಿದೆ.
ಕೊಲೆಯಾದ ವ್ಯಕ್ತಿಯನ್ನು ರೂಪೇಶ್ ಕುಮಾರ್(45) ಎಂದು ಗುರುತಿಸಲಾಗಿದೆ.
ಮೂಲತಃ ಹೊಳೆಹೊನ್ನೂರಿನವರಾದ ರೂಪೇಶ್ ಕುಮಾರ್ ಅವರು ಶಿವಮೊಗ್ಗದಲ್ಲಿ ನೆಲೆಸಿದ್ದರು. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಕುಡಿಯಲು ಕುಶಾಲ್ ಮತ್ತು ಸೋಮಶೇಕರ್ ಎಂಬುವರೊಂದಿಗೆ ನಿನ್ನೆ ರೂಪೇಶ್ ಕುಡಿಯಲು ಎಪಿಎಂಸಿಗೆ ಹೋಗಿದ್ದನು ಎನ್ನಲಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















