ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಬೇರ ನಾಯಕರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೋಡಿಹಳ್ಳಿ ಗ್ರಾಮದ ಜಿ.ಆರ್. ನಾಗರಾಜ್ ಗೌಡ್ರು ನೂತನ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಉಮಾದೇವಿ ತಿಪ್ಪೇಶ್, ಮಾಜಿ ಅಧ್ಯಕ್ಷರಾದ ಮಲಕ್ ವೀರಪ್ಪನ್, ಮಾಜಿ ಅಧ್ಯಕ್ಷರಾದ ಜಯಣ್ಣ, ಮಾಜಿ ಉಪಾಧ್ಯಕ್ಷರಾದ ಕುಬೇರ್ ನಾಯ್ಕರವರು, ತಾಲೂಕು ಸುಗ್ರಾಮ ಅಧ್ಯಕ್ಷರಾದ ಗೌರಮ್ಮ ಮಹದೇವ್, ಸದಸ್ಯರಾದ ವಿಶ್ವನಾಥ್, ಸ್ವಾಮಿನಾಥನ್, ರುದ್ರೇಶ್, ನೀಲಾಬಾಯಿ, ಪರ್ವತಿ ಬಾಯಿ, ಸಿದ್ದಮ್ಮ, ಭಾಗ್ಯಮ್ಮ ಭಾಗವಹಿಸಿದ್ದರು.
Also read: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ ನೇಮಕಕ್ಕೆ ಅಧಿಸೂಚನೆ: ಅರ್ಹತೆಗಳೇನು? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post