ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾ ಜಲಾಶಯದಿಂದ #BhadraDam ಭಾರಿ ಪ್ರಮಾಣದಲ್ಲಿ ನದಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊಸ ಸೇತುವೆ ಮುಳುಗುವ ಹಂತ ತಲುಪಿದ್ದು, ಇಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಮಲೆನಾಡು #Malnad ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಭದ್ರಾ ಅಣೆಕಟ್ಟೆಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಹೀಗಾಗಿ ಸುಮಾರು 30 ಸಾವಿರ ಕ್ಯೂಸೆಕ್ಸ್ ನೀರನ್ನು ಇಂದು ಮುಂಜಾನೆಯಿಂದ ನದಿಗೆ ಹರಿಸಲಾಗುತ್ತಿದೆ. ಪರಿಣಾಮವಾಗಿ ನಗರದಲ್ಲಿ ನದಿ ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹೊಸ ಸೇತುವೆ ಮೇಲೆ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಸೇತುವೆಯ ಎರಡೂ ಕಡೆ ಬ್ಯಾರಿಕೇಡ್ ಅಳವಡಿಸಿ, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇನ್ನು ಹೊಸ ಸೇತುವೆ ಮೇಲೆ ಸಂಚಾರ ನಿರ್ಬಂಧಿಸಿರುವ ಪರಿಣಾಮ ಬಿಎಚ್ ರಸ್ತೆ ಹಾಗೂ ಹಳೆ ಸೇತುವೆ ಮೇಲೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಒಂದೆಡೆ ಟ್ರಾಫಿಟ್ ದಟ್ಟಣೆ, ಇನ್ನೊಂದೆಡೆ ಮಳೆಯಿಂದಾಗಿ ವಾಹನ ಸವಾರರು ಹೈರಾಣಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post