ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
75ನೆಯ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ವೀರಶೈವ ಸಭಾಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ, ಉಡಿ ತುಂಬುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
75ನೆಯ ಸ್ವಾತಂತ್ರೋತ್ಸವದ ಸವಿನೆನಪಿಗೆ ಮಹಾಸಭಾದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಹಾಗೂ ಸಮಾಜದ ನೌಕರರ ವರ್ಗಕ್ಕೆ ಸನ್ಮಾನ ಕಾರ್ಯಕ್ರಮವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ. ಮಾಧುಸ್ವಾಮಿ ಉದ್ಘಾಟಿಸಿದರು.
ಮಹಾಸಭಾ ಗೌರವಾಧ್ಯಕ್ಷರಾದ ಹಿರೇಮಠ ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿದ್ದರು. ಜಿ. ಸುರೇಶಯ್ಯ ಅಧ್ಯಕ್ಷತೆ ವಹಿಸಿ, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ಧನಂಜಯ ಉಪನ್ಯಾಸ ನಡೆಸಿಕೊಟ್ಟರು.
ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಕೆ, ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಕರ್ನಾಟಕ ರಾಜ್ಯ ಒಳಚರಂಡಿ ಹಾಗೂ ನೀರು ಸರಬರಾಜು ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಚ್.ಎಸ್. ಸಾವಿತ್ರಿ, ಮಹಾಸಭಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ರುದ್ರಮುನಿ ಎಸ್. ಸಜ್ಜನ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಹಟ್ಟಿ ಚಿನ್ನದ ಗಣಿ ನಿರ್ದೇಶಕ ಎಸ್. ಹಾಲೇಶ್ ಕೂಡ್ಲಿಗೆರೆ ಮತ್ತು ಪಿಎಲ್’ಡಿ ಬ್ಯಾಂಕ್ ಉಪಾಧ್ಯಕ್ಷ ಎಸ್. ವಿರುಪಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post