ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದ) ವತಿಯಿಂದ ಇಂದು ಮಿನಿವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಶ್ರೀಸಾಮಾನ್ಯರು ಬದುಕು ಸಾಗಿಸುವುದು ದುಸ್ತರವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಇಳಿಕೆಯಾಗಿದ್ದರು ಸಹ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಿಸುವಲ್ಲಿ ವಿಫಲವಾಗಿವೆ. ಈ ಹಿನ್ನಲೆಯಲ್ಲಿ ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.
ಅಬಕಾರಿ ಸುಂಕ ಗಳಲ್ಲಿನ ಹೆಚ್ಚಳವು ಕಾರ್ಪೊರೇಟ್ ಹಾಗೂ ಆದಾಯ ತೆರಿಗೆ ಆದಾಯ ತೆರಿಗೆ ತೆರಿಗೆ ಪಾವತಿದಾರರಿಗೆ ಒದಗಿಸಿರುವ ತೆರಿಗೆಗಳಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ನಷ್ಟವನ್ನು ಭರ್ತಿ ಮಾಡುವ ಮುನ್ಸೂಚನೆ ಕಂಡುಬಂದಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಆರ್ಥಿಕ ಸಂಕಷ್ಟ ಎದುರಾಗಲಿದೆ. ಕೂಡಲೇ ಬೆಲೆ ಕಡಿತ ಗೊಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ನಾರಾಯಣ, ಮಂಜಣ್ಣ, ಸೋಮಣ್ಣ, ಹನುಮಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post