ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ವೀಕೆಂಡ್ ಕರ್ಫ್ಯೂ ಹಾಗೂ ಸೋಮವಾರದಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಅಗತ್ಯ ವಸ್ತು ಖರೀದಿಗಾಗಿ ಜನರು ಮುಗಿಬಿದ್ದಿದ್ದು, ಸ್ವತಃ ನಗರಸಭೆ ಆಯುಕ್ತರೇ ಫೀಲ್ಡಿಗಳಿದು ತೆರವು ಕಾರ್ಯ ಮಾಡಬೇಕಾಗಿ ಬಂದಿತ್ತು.
ನಗರದ ಬಿಎಚ್ ರಸ್ತೆಯ ಅಂಗಡಿ ಮುಂಗಟ್ಟುಗಳಲ್ಲಿ ಬೆಳಿಗ್ಗೆ ಜನಸಂದಣಿ ಅಧಿಕಗೊಂಡ ವಿಚಾರದ ತಿಳಿದು ಸ್ಥಳಕ್ಕೆ ಆಗಮಿಸಿದ ಆಯುಕ್ತ ಮನೋಹರ್ ಸ್ವತಃ ಮೈಕ್ ಹಿಡಿದು ಎಚ್ಚರಿಕೆ ನೀಡುತ್ತಾ ನಡೆದುಕೊಂಡೇ ಸಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು.
ಅಂಗಡಿ ಮುಂಗಟ್ಟುಗಳ ಮಾಲೀಕರಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಎಚ್ಚರಿಕೆ ನೀಡಿದ ಆಯುಕ್ತರು, ಮಾಸ್ಕ್ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಕೊರೋನಾ ಸೋಂಕು ಕುರಿತು ಕುರಿತು ಜಾಗೃತಿ ಮೂಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post