ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಹೊಳೆಹೊನ್ನೂರಿನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಬಿ.ಎಸ್. ಪ್ರಕಾಶ್ ಎನ್ನುವವರನ್ನು ಬಂಧಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವ ಸಲುವಾಗಿ ಮೆಸ್ಕಾಂ ಹೊಳೆಹೊನ್ನೂರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನೀಯರ್ ಪ್ರಕಾಶ್ ಅವರು 5000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post