ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಈ ತಿಂಗಳು ನಡೆಯಲಿರುವ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಆಶಾಭಾವನೆ ವ್ಯಕ್ತಪಡಿಸಿದರು.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಾಜಿ ಶಾಸಕ ದಿ. ಅಪ್ಪಾಜಿವರು ತೋರಿದ ಮಾರ್ಗ ನಮ್ಮೊಂದಿಗಿದೆ. ಅವರು ಇಂದು ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ, ಅವರು ತೋರಿದ ಮಾರ್ಗದಲ್ಲಿ ನಾವೆಲ್ಲಾ ಒಟ್ಟಾಗಿ ಸಾಗಬೇಕಿದೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿದಿತ್ತು. ಈ ಬಾರಿಯೂ ಸಹ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್ ಮಾತನಾಡಿ, ಅಪ್ಪಾಜಿಯವರು ನಮ್ಮೊಂದಿಗೆ ಇಲ್ಲದಿರುವ ಸಂದರ್ಭದಲ್ಲಿ ಚುನಾವಣೆ ಎದುರಾಗಿದೆ. ಈ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವುದು ಅನಿವಾರ್ಯವಾಗಿದೆ. ಅಪ್ಪಾಜಿಯವರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿವೆ ಎಂದರು.
ಮಾಜಿ ಶಾಸಕಿ ಶಾರದ ಪೂರ್ಯಾನಾಯ್ಕ, ಜಿಪಂ ಸದಸ್ಯ ಎಸ್. ಮಣಿಶೇಖರ್, ಮಾಜಿ ಸದಸ್ಯ ಎಸ್. ಕುಮಾರ್, ಜಿಪಂ ಸದಸ್ಯ ಜೆ.ಪಿ. ಯೋಗೇಶ್, ಎಂ.ಎ. ಅಜಿತ್, ಕರಿಯಪ್ಪ, ಡಿ.ಟಿ. ಶ್ರೀಧರ್, ಪೀರ್‌ಷರೀಫ್, ಮೈಲಾರಪ್ಪ, ಸುಕನ್ಯ, ಕುಮಾರ್, ಬದರಿನಾರಾಯಣ, ಗುಣಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post