ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕನ್ನಡ ರಾಜ್ಯೋತ್ಸವ ಎಂಬುದು ಕೇವಲ ಧ್ವಜಾರೋಹಣ, ಸಿಹಿ ಹಂಚಿಕೆಗೆ ಸೀಮಿತವಾಗದಿರಲಿ ಎಂದು ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಅಭಿಪ್ರಾಯಪಟ್ಟರು.
ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕ, ಕನ್ನಡ ಸಾಹಿತ್ಯಾಭಿಮಾನಿಗಳ ಬಳಗ ಅಂತರಗಂಗೆ ಆಯೋಜಿದ್ದ ನಾಡ ದೇವಿಗೆ ನಮನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಉಪನ್ಯಾಸ ನೀಡಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವಲ್ಲ. ಅದು ಈ ನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುತ್ತಾ ಮಕ್ಕಳಲ್ಲಿ ಅದರ ಅರಿವು ಮೂಡಿಸುವ, ಕನ್ನಡ ನಾಡು, ನುಡಿ ಮಹತ್ವವನ್ನು ಬಿಂಬಿಸುವ ಕಾರ್ಯಕ್ರಮ. ಕನ್ನಡ ಭಾಷೆ, ನಾಡು ಬೆಳೆದುಬಂದ ಹಾದಿಯನ್ನು ಅವಲೋಕಿಸಿದಾಗ ಅದು ಜನಸಾಮಾನ್ಯರಿಂದ ಬೆಳೆದುಬಂದ ಪರಂಪರೆತಯಾಗಿದೆ ಹೊರತು ರಾಜಮಹಾರಾಜರಿಂದ ಉಂಟಾದದ್ದಲ್ಲ, ಮಕ್ಕಳಲ್ಲಿ ಪೋಷಕರು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸದಿದ್ದರೆ ಅದು ಮುಂದಿನ ದಿನಗಳಲ್ಲಿ ಅವರುಗಳು ಅನೇಕ ಸದಭಿರುಚಿಯವಿಷಯಗಳನ್ನು ಅರಿಯಲು ಅಸಾಧ್ಯವೆನ್ನುವ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ಮಕ್ಕಳು, ಯುವಜನಾಂಗ ಟಿವಿ, ಮೊಬೈಲ್ ಲೋಕದಲ್ಲಿ ಮುಳುಗುವ ಹವ್ಯಸದಿಂದ ಹೊರಬಂದು ಪುಸ್ತಕ ಓದುವುದನ್ನು ಹೆಚ್ಚಿಸಿಕೊಂಡು ಜ್ಞಾನ ಭಂಡಾರವನ್ನು ಹೆಚ್ಚಿಸಿ ಕೊಳ್ಳಬೇಕು ಎಂದರು.
ವೇದಿಕೆ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿ, ರಾಜ್ಯೋತ್ಸವ ಎಂದಾಕ್ಷಣ ಸಂಭ್ರಮಿಸಬೇಕಾದ ದಿನಗಳು ಇದುವರೆಗೂ ಒದಗಿ ಬರೆದಿರುವುದು ಈ ನಾಡಿನ ದೊಡ್ಡ ದುರಂತವಾಗಿದೆ. ಆಂಗ್ಲ ಬಾಷೆಯಲ್ಲಿ ಶಿಕ್ಷಣ ದೊರೆಯದಿದ್ದರೆ ಮುಂದಿನ ದಿನಗಳು ಕಷ್ಟವಾಗುತ್ತದೆ ಎಂಬ ತಪ್ಪು ಕಲ್ಪನೆಗಳು ಪ್ರತಿ ಪೋಷಕರಲ್ಲೂ ಮೂಡುತ್ತಿವೆ ಎಂದರು.
ಕನ್ನಡ ಭಾಷೆಯಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವೇದಿಕೆ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾಗರಾಜ್, ವಿ.ಎಚ್. ಹರೀಶ್ ಬಾಬು, ಎಸ್.ಕೆ. ಗುರುಸ್ವಾಮಿ, ಬಿ.ನಾಗೇಶ್, ಶ್ರೀಧರ್, ಅಶೋಕ್, ಪೀಟರ್, ಗುರು, ಲೋಕೇಶ್ ಶಿವಲಿಂಗಯ್ಯ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post