ಕಲ್ಪ ಮೀಡಿಯಾ ಹೌಸ್ | ಭದ್ರಾವತಿ/ಲಕ್ಕವಳ್ಳಿ |
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಭದ್ರಾ ಅಣೆಕಟ್ಟೆಯಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಬಿಡಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಅಣೆಕಟ್ಟೆಯಲ್ಲಿ ಪೂಜೆ ಸಲ್ಲಿಸಿ, ನದಿಗೆ ನೀರು ಹರಿಸಲಾಗಿದೆ. ಈ ಬಾರಿಯ ಮಳೆಗಾಲದಲ್ಲಿ ಅಣೆಕಟ್ಟೆ ತುಂಬುವ ಹಂತಕ್ಕೆ ಬಂದಿದೆ. ಹೀಗಾಗಿ, ನಾಲ್ಕು ಕ್ರಸ್ಟ್ ಗೇಟ್’ಗಳ ಮೂಲಕ ನದಿಗೆ ನೀರು ಹರಿಸಲಾಯಿತು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಉಪಸ್ಥಿತರಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಬಾರಿಯ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟೆಯಿಂದ ಇಂದು ನೀರು ಹೊರಕ್ಕೆ ಹರಿಸಿದ್ದು, ನೂರಾರು ಮಂದಿ ಸುಂದರ ದೃಶ್ಯವನ್ನು ಕಣ್ತುಂಬಿಕೊಂಡರು.
ಅಣೆಕಟ್ಟೆಯಿಂದ ನದಿಗೆ ನೀರು ಹರಿಸಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.









Discussion about this post