ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿರುವ ಅಷ್ಟ ಲಿಂಗೇಶ್ವರ ದೇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವತಃ ಅಭಿಷೇಕ ನೆರವೇರಿಸಿದರು.
ಸುಶಾಸನ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭದ್ರಾವತಿಗೆ ಭೇಟಿ ನೀಡಿರುವ ಅವರು ಅಷ್ಟ ಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.
ದೇಗುಲದ ಗರ್ಭಗುಡಿಯಲ್ಲಿ ಮೂಲ ದೇವರಿಗೆ ಸ್ವತಃ ಅಭಿಷೇಕ ನಡೆಸಿದ ಸಚಿವ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಸಚಿವರೊಂದಿಗೆ ಸಂಸದ ಬಿ.ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಅವರುಗಳು ವಿಶೇಷ ಪೂಜೆ ಸಲ್ಲಿಸಿದರು.
ಆನಂತರ ಸಚಿವರು ಹಾಗೂ ಸಂಸದರು ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸ್ಬೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಹಾಗೂ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post