ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಆಗ ಎಂಪಿಎಂ ಕಾರ್ಖಾನೆಯನ್ನು ಮತ್ತೆ ಆರಂಭಿಸುತ್ತೇವೆ ಎಂದು ಮಾಜಿ ಸಿಎಂ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ.
ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಾಂತಿಪ್ರಿಯ ಹಾಗೂ ಜನಪರ ರಾಜಕಾರಣಿ ಸಂಗಮೇಶ್ವರ್ ಅವರನ್ನು ಶಾಸಕರಾಗಿ ಪಡೆದಿರುವ ಭದ್ರಾವತಿ ಜನತೆ ಪುಣ್ಯ ಮಾಡಿದ್ದಾರೆ. ಕಾರ್ಮಿಕರೇ ಹೆಚ್ಚಿರುವ ಇಲ್ಲಿ ಮುಂದಿನ ಬಾರಿಯೂ ಸಂಗಮೇಶ್ವರ್ ಗೆಲ್ಲುವುದು ನಿಶ್ಚಿತವಾಗಿದ್ದು, ಆನಂತರ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದರು.









Discussion about this post