ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸುಶಾಸನ್ ದಿವಸ್ ಹಾಗೂ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಹಾಗೂ ಅಧ್ಯಕ್ಷರಾಗಿ ಪಾಲ್ಗೊಂಡಿದ್ದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ವೀಕ್ಷಣೆ ಮಾಡಿರುವುದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವಾದ ಇಂದು ಸುಶಾಸನ್ ದಿವಸ್ ಹಾಗೂ ಕಿಸಾನ್ ಸಮ್ಮಾನ್ ಕಾರ್ಯಕ್ರಮವನ್ನು ಮಂಜುನಾಥ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿತ್ತು.
ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸ್ಬೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಸೇರಿದಂತೆ ಹಲವರು ಕಾರ್ಯಕರ್ತರ ನಡುವೆ ಸಾಮಾನ್ಯರಂತೆ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಿದರು.
ಗಣ್ಯರು ಎಂಬ ಹಮ್ಮುಬಿಮ್ಮು ಇಲ್ಲದೇ ಸಾಮಾನ್ಯ ಕಾರ್ಯಕರ್ತರ ನಡುವೆ ಕುಳಿತಿದ್ದಕ್ಕೆ ಕಾರ್ಯಕರ್ತರು ಹಾಗೂ ನೆರೆದಿದ್ದ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post