ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಸ.ಪ.ಪೂ.ಕಾಲೇಜು ತರೀಕೆರೆ ರಸ್ತೆ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಾಗರಾಜ್(42) ಬುಧವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪತಿ ಅನವೇರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ನಾಗರಾಜ್, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಇವರು ದಲಿತ ಸಂಘರ್ಷ ಸಮಿತಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ನಗರದ ಶಿಕ್ಷಕ ವೃಂದದವರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post