ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಡಿಯ ದೇಶದಲ್ಲೇ ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಇದಕ್ಕೆ ಪೂರಕವಾಗಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಆರ್’ಎಎಫ್ ಘಟಕದ ಭೂಮಿ ಪೂಜೆ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
ರಾಷ್ಟ್ರೀಯ ಏಕತೆಯ ವಿಚಾರದಲ್ಲಿ ಸರ್ದಾರ್ ವಲ್ಲಬಾ ಭಾಯ್ ಪಟೇಲ್ ಅವರ ಚಿಂತನೆ ಹಾಗೂ ಪಾತ್ರ ದೇಶದಲ್ಲಿ ಮಹತ್ವದ್ದಾಗಿದೆ. ಈಗ ಗೃಹ ಸಚಿವ ಅಮಿತ್ ಶಾ ಅವರು ಪಟೇಲರಂತೆಯೇ ರಾಷ್ಟ್ರದ ಏಕತೆಗಾಗಿ ಶ್ರಮಿಸುತ್ತಿದ್ದು, ಜಮ್ಮು ಕಾಶ್ಮೀರದ ವಿಚಾರವೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.
ವಿಶ್ವೇಶ್ವರಯ್ಯನವರು ಕನಸು ಕಂಡಿದ್ದ ಭದ್ರಾವತಿಯ ಎರಡು ಕಾರ್ಖಾನೆಗಳು ಹಲವು ಕಾರಣಗಳಿಂದ ದುಃಸ್ಥಿತಿಗೆ ತಲುಪಿವೆ. ಹೀಗಾಗಿ, ನಗರದ ಗತವೈಭವ ಮತ್ತೆ ಮರುಕಳಿಸಬೇಕು ಎಂಬ ಉದ್ದೇಶಿದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ವಿಐಎಸ್’ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳನ್ನು ಪುನರುಜ್ಜೀವನ ಮಾಡಲಾಗುತ್ತಿದೆ. ಆರ್’ಎಎಫ್ ಘಟಕ ನಗರದಲ್ಲಿ ಸ್ಥಾಪನೆಯಾಗುತ್ತಿರುವುದು ಇದಕ್ಕೆ ಪೂರಕವಾಗಿಯೇ ಇದೆ ಎಂದರು.ಇನ್ನು, ಶಿವಮೊಗ್ಗವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದ್ದು, ಇದಕ್ಕೆ ಪೂರಕವಾಗಿ ರೈಲ್ವೆ ಸಂಪರ್ಕ, ರೈಲ್ವೆ ಕೋಚಿಂಗ್ ಸೆಂಟರ್, ಪ್ರವಾಸೋದ್ಯಮ ಅಭಿವೃದ್ಧಿ, ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಸೇರಿದಂತೆ ಜಿಲ್ಲೆಯಲ್ಲಿ ಸಮಗ್ರವಾಗಿ ಅಭಿವದ್ಧಿ ಕಾರ್ಯಗಳು ನಡೆಯುತ್ತಿವೆ. ಇದಕ್ಕೆ ಸಹಕಾರ ನೀಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post