ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದಲ್ಲಿ ನಡೆದ ಮೆರವಣಿಗೆ ವೇಳೆ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತಂತೆ ವೀಡಿಯೋವೊಂದು ವೈರಲ್ ಆಗಿದೆ ಎಂದು ಆರೋಪಿಸಲಾಗಿದ್ದು, ಮೆರವಣಿಗೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ಯುವಕರ ಗುಂಪು ಮೊಬೈಲ್ ಟಾರ್ಚ್’ಗಳನ್ನು ಹಿಡಿದು ನಿಂತಿರುವ ವೇಳೆ, ಮಧ್ಯದಲ್ಲಿದ್ದ ಯುವಕರ ಪೈಕಿ ಕೆಲವರು ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.ವಿಡಿಯೋ ವೈರಲ್ ಆಗುತ್ತಿದ್ದು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೆಲ ಯುವಕರಿಂದ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗುವುದು ಕೇಳಿಬಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ 12 ಸೆಕೆಂಡ್ ನ ವಿಡಿಯೋ ಇದಾಗಿದ್ದು, ಗಾಂಧಿ ವೃತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ.
“ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ” ವೈರಲ್ ಆಗುತ್ತಿರುವ ವಿಡಿಯೋ ಕುರಿತು ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು, ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ.ಎಸ್’ಪಿ ಮಿಥುನ್ ಕುಮಾರ್ ಏನೆಂದರು?
ಈ ಕುರಿತ ವೀಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾ ಪೊಲೀಸರು ಎಫ್’ಐಆರ್ ದಾಖಲಿಸಲು ಸಿದ್ದತೆ ನಡೆಸಿದ್ದಾರೆ.
ಈ ಕುರಿತಂತೆ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಭದ್ರಾವತಿಯಲ್ಲಿ ನಿನ್ನೆ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಭದ್ರಾವತಿಯಲ್ಲಿ ಎಫ್’ಐಆರ್ ದಾಖಲಿಸಲಾಗುತ್ತಿದೆ. ಘೋಷಣೆ ಕೂಗಿದವರು ಯಾರು, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸಾಗುತ್ತಿದೆ. ತನಿಖೆ ನಡೆಯಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post