ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಾಗ್ದಾಳಿ ನಡೆಸಿದರು.
ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳು ಬೆಲೆ ಏರಿಕೆ ಖಂಡಿಸಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ದುರಾಡಳಿತದಿಂದ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳು ಖಾಸಗೀಕರಣಗೊಂಡು ನಿರುದ್ಯೋಗ ಸಮಸ್ಯೆ ಎದುರಾಗಿದೆ. ವಿಐಎಸ್ ಎಲ್ ಹಾಗೂ ಎಂಪಿಎಂ ಕಾರ್ಖಾನೆಗಳು ಅವನತಿಯತ್ತ ಸಾಗಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ ಎಂದರು.
ಕೈಗಾರಿಕೆ ಪ್ರದೇಶಗಳಲ್ಲಿನ ಸುಮಾರು ಸಣ್ಣ ಪುಟ್ಟ ಕೈಗಾರಿಕೆಗಳು ಮುಚ್ಚಲ್ಪಟ್ಟು ಕಾರ್ಮಿಕರು ಆತ್ಮಹತ್ಯೆಗೆ ಮುಂದಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನ ನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ದೇಶ ದ್ರೋಹ ಮಾಡುತ್ತಿರುವ ಬಿಜೆಪಿ ಸರ್ಕಾರಗಳನ್ನು ಕಿತ್ತು ಹಾಕಬೇಕು. ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕಾರ್ಯ ಮಾಡುತ್ತಿದ್ದಾರೆಂದು ಎಂದು ಕಿಡಿ ಕಾರಿದರು.
ಎಂಎಲ್’ಸಿ ಪ್ರಸನ್ನ ಕುಮಾರ್ ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸುಂದರೇಶ್, ಮುಖಂಡರಾದ ಟಿ. ಚಂದ್ರೇಗೌಡ, ಮಹಮ್ಮದ್ ಸನಾವುಲ್ಲಾ, ಎಚ್.ಎಲ್. ಷಡಾಕ್ಷರಿ, ಶ್ರೀನಿವಾಸ ಕರಿಯಣ್ಣ, ದಿಲ್ದಾರ್, ವೈ. ರೇಣುಕಮ್ಮ, ಬಿ.ಕೆ. ಮೋಹನ್ ಸೇರಿದಂತೆ ಅನೇಕರು ಇದ್ದರು.
ಕೆಎಸ್’ಆರ್’ಟಿಸಿ ಬಸ್ ನಿಲ್ದಾಣ ಸಮೀಪ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಹಾಲಪ್ಪ ವೃತ್ತ, ಡಾ. ರಾಜಕುಮಾರ್ ರಸ್ತೆ, ಮಾಧವಚಾರ್ ವೃತ್ತ, ರಂಗಪ್ಪ ವೃತ್ತದ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರಟು ಮಿನಿ ವಿಧಾನಸೌಧ ಮುಂಭಾಗ ಜಮಾಯಿಸಿದರು. ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post