ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇತ್ತೀಚೆಗೆ ತೆರೆಕಂಡ ಪೊಗರು ಕನ್ನಡ ಚಿತ್ರದಲ್ಲಿ ವಿಪ್ರ ಸಮುದಾಯವನ್ನು ಅವಮಾನಕರವಾಗಿ ಚಿತ್ರಿಸಿರುವ ಚಿತ್ರತಂಡ ಹಾಗೂ ಬ್ರಾಹ್ಮಣ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ಕ್ಷಮೆ ಕೋರಬೇಕು ಎಂದು ತಾಲೂಕು ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.
ಈ ಕುರಿತಂತೆ ತಾಲೂಕು ಸಭೆ ನಡೆಸಿದ ನಂತರ ಮಾತನಾಡಿರುವ ತಾಲೂಕು ಸಭಾ ಅಧ್ಯಕ್ಷ ಜನಾರ್ಧನ ಅಯ್ಯಂಗಾರ್, ಈ ಘಟನೆಗಳು ಬ್ರಾಹ್ಮಣ ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸಿರುವುದು ನಮಗೆ ಹಾಗೂ ಧಾರ್ಮಿಕ ಭಾವನೆಗಳಿಗೆ ನೋವು ತಂದಿದೆ. ಬ್ರಾಹ್ಮಣರು ಪ್ರತಿಭಟಿಸುವುದಿಲ್ಲ ಹಾಗೂ ಅವರಲ್ಲಿ ಐಕ್ಯತೆ ಇಲ್ಲ ಎಂಬ ಭಾವನೆಯಿಂದ ಪೊಗರು ಚಿತ್ರದಲ್ಲಿ ಅವಮಾನವೀಯವಾಗಿ ಚಿತ್ರಿಸಿ ಕ್ರೌರ ಮೆರೆಯಲಾಗಿದೆ. ಚಲನಚಿತ್ರಗಳು ಮನೋರಂಜನೆಯೊಂದಿಗೆ ಜನರಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಅರಿವು ಮೂಡಿಸಬೇಕೇ ಹೊರತು ಧಾರ್ಮಿಕ ಮತ್ತು ಜಾತಿ ನಿಂದನೆ ಮಾಡುವುದು, ಅವಮಾನಿಸುವುದು ಸರಿಯಲ್ಲ ಎಂದು ಖಂಡನೆ ವ್ಯಕ್ತಪಡಿಸಲಾಯಿತು ಎಂದು ತಿಳಿಸಿದ್ದಾರೆ.
ಅದೇ ರೀತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಾಹ್ಮಣ ಅರ್ಚಕ ಸಮುದಾಯದವರನ್ನು ಅವಮಾನಿಸಿದ್ದು, ಈ ಹಿನ್ನೆಲೆಯಲ್ಲಿ ಅವರು ತತಕ್ಷಣ ಬಹಿರಂಗವಾಗಿ ಸಮುದಾಯದ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದ್ದಾರೆ.
ಸಭಾದ ಉಪಾಧ್ಯಕ್ಷ ರಮಾಕಾಂತ್, ಕಾರ್ಯದರ್ಶಿ ಜಿ. ರಮೇಶ್, ಖಜಾಂಚಿ ಮಂಜುನಾಥ್, ಪ್ರಭಾಕರ್ ಜೋಯ್ಸ್, ನರಸಿಂಹಸ್ವಾಮಿ, ನೀಲಕಂಠ ಜೋಯ್ಸ್, ರಾಜಶೇಖರ್, ಎನ್. ಕೃಷ್ಣಮೂರ್ತಿ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post