ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜ್ಯ ಹಾಗೂ ದೇಶದಲ್ಲಿ ಬಡ ಹಾಗೂ ಮದ್ಯಮ ವರ್ಗದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಎರಡೂ ಕಡೆಗಳಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುವ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.
ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರ ಹಾಗೂ ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ. ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಅಫ್ತಾಬ್ ಅಹಮದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಅಡುಗೆ ಸಿಲಿಂಡರ್’ಗಳಿಗೆ ಹೂವಿನ ಹಾರ ಹಾಕಿ ವಿನೂತನವಾಗಿ ಪ್ರತಿಭಟಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮದ್ ರಫೀಕ್, ಅಮೋಸ್, ಹಿಂದುಳಿದ ಘಟಕದ ಅಧ್ಯಕ್ಷ ಬಿ. ಗಂಗಾಧರ್, ಕೃಷ್ಣರಾಜ್, ತಬ್ರೇಜ್ ಖಾನ್, ನವೀನ್ ಕುಮಾರ್, ವರಣ್, ಸಜ್ಜದ್, ಸಂತೋಷ್, ಭರತ್, ಸುನಿಲ್, ಆದರ್ಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post