ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಳೇನಗರದ ರಂಗಪ್ಪ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಿಲಿಂಡರ್ ಹಿಡಿದುಕೊಂಡು ತಾಲೂಕು ಕಚೇರಿ ಆವರಣದವರೆಗೆ ತೆರಳಿದ ಪ್ರತಿಭಟನಾಕಾರರು ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಉಪ ತಹಶೀಲ್ದಾರ್ ಮಂಜಾನಾಯ್ಕ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post