ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಧಾರ್ಮಿಕ ಕೇಂದ್ರಗಳು ಭಕ್ತರಿಗೆ ಶ್ರದ್ಧಾ ಭಕ್ತಿಯನ್ನು ಕಲಿಸುವ ಜೊತೆಯಲ್ಲಿ ಸುಶಿಕ್ಷಿತರನ್ನಾಗಿಸಲು ಪ್ರಯತ್ನಿಸಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಅಭಿಪ್ರಾಯಪಟ್ಟರು.
ತಿಮ್ಲಾಪುರದಲ್ಲಿ ಶ್ರೀ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಕರ ಸಂಕ್ರಾಂತಿಯ ಉತ್ತರಾಯಣದ ಪ್ರಥಮ ಸೋಮವಾರದಂದು ವೆಂಕಟೇಶ್ವರ ಸ್ವಾಮಿ ಮತ್ತು ಅಷ್ಟ ಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜಾ ಮತ್ತು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಷ್ಠಲಿಂಗೇಶ್ವರ ಸ್ವಾಮಿಗೆ ಸ್ವತಃ ವಿಶೇಷ ಪೂಜೆಯನ್ನು ಸಲ್ಲಿಸಿ ಶಿವಮೊಗ್ಗ ಜಿಲ್ಲೆಯ ರಾಮಕೃಷ್ಣ ಮಠದ ಶ್ರೀ ವಿನಯಾನಂದ ಸ್ವಾಮೀಜಿಯವರ ಆಶೀರ್ವಚನ ಸ್ವೀಕರಿಸಿದರು.









Discussion about this post