ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಾನೇನು ಸಮಾಜಘಾತುಕನಾ ಅಥವಾ ಯಾರಿಗಾದರೂ ತೊಂದರೆ ಕೊಟ್ಟಿದ್ದೀನಾ? ನನ್ನನ್ನು ಯಾಕೆ ಬಂಧಿಸುತ್ತಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶ್ನಿಸಿದ್ದಾರೆ.
ತಮ್ಮನ್ನು ಬಂಧಿಸಲಾಗಿದೆ ಎಂದು ಹಳೆಯ ವೀಡಿಯೋವೊಂದನ್ನು ವೈರಲ್ ಮಾಡಿರುವ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಿರುವ ಅವರು, ಇದೊಂದು ಕಿಡಿಗೇಡಿಗಳ ಕೃತ್ಯವಾಗಿದೆ ಎಂದಿದ್ದಾರೆ.
ನನ್ನನ್ನು ಹಾಗೂ ನನ್ನ ಕುಟುಂಬಸ್ಥರನ್ನು ಬಂಧಿಸಿದ್ದಾರೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಮೂಲಕ ತಪ್ಪು ಸಂದೇಶ ರವಾನಿಸಿದ್ದಾರೆ. ನಾನು ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಂಗಳೂರಿನಲ್ಲಿದ್ದೇನೆ. ನಾನೆಲ್ಲೂ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಂಧಿಸುವಂತಹ ಕೆಲಸ ನಾನೇನು ಮಾಡಿಲ್ಲ. ಸುಳ್ಳು ಸುದ್ದಿ ಹಾಗೂ ವದಂತಿಗಳಿಗೆ ಕಿವಿಗೊಡಬೇಡಿ. ಕ್ಷೇತ್ರದ ಜನತೆಯ ಸೇವೆಗಾಗಿ ನನ್ನ ಮನೆ ಬಾಗಿಲು ಎಂದಿಗೂ ತೆರೆದಿರುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post