ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತಾಲೂಕು ವ್ಯಾಪ್ತಿಯ 20 ಸ್ಥಾನಗಳಲ್ಲಿಯೂ ನಮ್ಮ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗ ನಡೆಯಲಿರುವ 20 ಸ್ಥಾನಗಳಲ್ಲಿ ಎಲ್ಲವನ್ನೂ ಸಹ ನಮ್ಮ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂಬ ಸಂಪೂರ್ಣ ಭರವಸೆಯಿದೆ. ನಮ್ಮ ಬೆಂಬಲಿತ ಅಭ್ಯರ್ಥಿಗಳು ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಮನಃಸ್ಥಿತಿಯವರಾಗಿದ್ದು, ಯಾವುದೇ ರೀತಿಯಲ್ಲೂ ಸಹ ದರ್ಪ, ದೌರ್ಜನ್ಯ ಮಾಡುವವರಲ್ಲ. ನನ್ನ ಅವಧಿಯಲ್ಲಿ ಶೇ.80ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ. ಇದಕ್ಕೆ ಮತದಾರರು ಆರ್ಶೀವದಿಸುತ್ತಾರೆ ಎಂಬ ಬಲವಾದ ನಂಬಿಕೆಯಿದೆ ಎಂದರು.
ನಾನು ವೈಯಕ್ತಿಕವಾಗಿ ಯಾವುದೇ ಪಕ್ಷ ಹಾಗೂ ಸಿದ್ದಾಂತಗಳನ್ನು ಟೀಕಿಸುವುದಿಲ್ಲ. ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಪೂರಕವಾಗಿ ನಮ್ಮ ಬೆಂಬಲಿತ ಅಭ್ಯರ್ಥಿಗಳೇ ಆಯ್ಕೆಯಾದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪೂರಕವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರೇಗೌಡ, ಬಿ.ಟಿ. ನಾಗರಾಜ್, ಗೋವಿಂದರಾಜು, ಚಂದ್ರಪ್ಪ ಹಾಗೂ ಬಿ.ಕೆ. ಮೋಹನ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post