ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಮೆಸ್ಕಾಂ ಕೂಡ್ಲಿಗೆರೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಲಿಂಕ್‌ಲೈನ್ ಕಾಮಗಾರಿ ಮತ್ತು ಸೀಗೆಬಾಗಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಸ್.ಎಫ್-1 ಭದ್ರಾ ಕಾಲೋನಿ ಮತ್ತು ಎಸ್.ಎಫ್ -2 ವೀರಾಪುರ ಫೀಡರ್‌ನಲ್ಲಿ 11 ಕೆ.ವಿ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.13ರಂದು ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಬದನೆಹಾಳ್, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಹಳ್ಳಿ, ಕಲ್ಪನಹಳ್ಳಿ, ಕೂಡ್ಲಿಗೆರೆ, ಅರಳಿಹಳ್ಳಿ, ಗುಡ್ಡದನೇರಲಕೆರೆ, ಕಲ್ಲಾಪುರ, ದಾನವಾಡಿ, ಡಿ.ಬಿ ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಿಹಾಳ್, ಅರಕೆರೆ, ಅರಬಳಚಿ, ತಿಮ್ಲಾಪುರ, ಕಣಕಟ್ಟೆ, ಭದ್ರಾಕಾಲೋನಿ, ಮಜ್ಜಿಗೇನಹಳ್ಳಿ, ಬಾಬಳ್ಳಿ, ಗೌಡ್ರಹಳ್ಳಿ, ಅಂಬೇಡ್ಕರ್ ಬೀದಿ, ಲಕ್ಷ್ಮೀಪುರ, ವೀರಾಪುರ, ಸೈಯ್ಯದ್ ಕಾಲೋನಿ, ಸೀಗೆಬಾಗಿ, ಸತ್ಯಸಾಯಿ ನಗರ ಮತ್ತು ಕೈಗಾರಿಕಾ ಪ್ರದೇಶ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post