ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳು ಮುಂದುವರೆದಿದ್ದು, ಶನಿವಾರ ಹಾಗೂ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಸೂಚನೆಯ ಮೇರೆಗೆ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದು, ಮೇ 29 ಮತ್ತು 30 ಶನಿವಾರ ಹಾಗೂ ಭಾನುವಾರ 2 ದಿನ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ.
ಹಾಲು ಮತ್ತು ಔಷಧ ಅಂಗಡಿಗಳು ಹೊರತುಪಡಿಸಿ ಉಳಿದ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ. ಅಲ್ಲದೆ ಸಾರ್ವಜನಿಕರು ವಿನಾಕಾರಣ ತಿರುಗಾಡುವಂತಿಲ್ಲ. ಸಂಪೂರ್ಣ ಲಾಕ್‌ಡೌನ್‌ಗೆ ಎಲ್ಲರೂ ಸಹಕಾರ ನೀಡುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post