ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕುವೆಂಪು ವಿಶ್ವ ವಿದ್ಯಾನಿಲಯದ ಬಳಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.25ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಲಕ್ಕವಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ನಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post