ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ ಘಟಕ-2ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.14 ರಿಂದ 19ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.


ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಮಹಾಲಕ್ಷ್ಮೀ ಲೇಔಟ್, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಕನಕ ನಗರ, ಕಾಳಿದಾಸ ಬಡಾವಣೆ, ಕೋಟೆ ಏರಿಯಾ, ಖಾಜಿ ಮೊಹಲ್ಲಾ, ಬಸವೇಶ್ವರ ಸಭಾಭವನ ಸುತ್ತಮುತ್ತ ಮತ್ತು ಬನಶಂಕರಿ ದೇವಸ್ಥಾನದ ಸುತ್ತಮುತ್ತ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















