ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಹಾಗೂ ಕಾಗದನಗರದಲ್ಲಿ ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-2003ಅಡಿಯಲ್ಲಿ ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ವತಿಯಿಂದ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಉಜ್ಜನಿಪುರ ಮತ್ತು ಕಾಗದ ನಗರದ ಹಲವೆಡೆ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಒಟ್ಟು 2,100 ರೂ. ದಂಡ ವಿಧಿಸಲಾಯಿತು. ಅಲ್ಲದೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಎಂ.ವಿ. ಅಶೋಕ್, ಎಚ್‌ಐಓ ಆನಂದಮೂರ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಶಿವಮೊಗ್ಗ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ರವಿರಾಜ್, ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಮಂಜುನಾಥ್ ಹಾಗೂ ನಗರ ಆರೋಗ್ಯ ಕೇಂದ್ರದ ಮನೋಹರ್, ಚೇತನ್ ಪಾಲ್ಗೊಂಡಿದ್ದರು.
Also read: ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವೈಭವ ಮರುಕಳಿಸಲು ಎಲ್ಲರೂ ಸಹಕರಿಸಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post