No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಬಡವರಿಗೆ ಮನೆ ನಿರ್ಮಿಸುವ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಸಂಗಮೇಶ್ವರ್ ಅಸಮಾಧಾನ

kalpa News by kalpa News
July 7, 2021
in ಭದ್ರಾವತಿ
0
ಬಡವರಿಗೆ ಮನೆ ನಿರ್ಮಿಸುವ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಸಂಗಮೇಶ್ವರ್ ಅಸಮಾಧಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಬಡವರಿಗೆ ಮನೆ ನಿರ್ಮಿಸಿಕೊಡುವ ಸಂಬಂಧ ಖಾಲಿ ಜಾಗ ಸರ್ವೆ ಮಾಡಿ ಆಶ್ರಯ ಸಮಿತಿಗೆ ವರದಿ ನೀಡುವಂತೆ ಹಲವು ಬಾರಿ ತಿಳಿಸಿದ್ದರೂ ಸಹ ತಹಸೀಲ್ದಾರ್ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ ಜನಪ್ರತಿನಿಧಿಗಳು ಕ್ಷೇತ್ರದ ಜನರ ವಿಶ್ವಾಸ ಕಳೆದುಕೊಳ್ಳುವಂತಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ಕಛೇರಿ ಸಭಾಂಗಣದಲ್ಲಿ ವಸತಿ ರಹಿತ ಬಡವರಿಗೆ ಮನೆ ನಿರ್ಮಾಣ ಹಾಗೂ ಸರ್ಕಾರಿ ಜಾಗದಲ್ಲಿ ಈಗಾಗಲೇ ಮನೆ ನಿರ್ಮಿಸಿಕೊಂಡಿರುವವರಿಗೆ 94ಸಿ ಮತ್ತು 94ಸಿಸಿ ಯೋಜನೆಯಡಿ ಹಕ್ಕು ಪತ್ರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಸಂಗಮೇಶ್ವರ್ ಮಾತನಾಡಿದರು.

ನಗರಸಭೆ ವ್ಯಾಪ್ತಿಯ ಬಹುತೇಕ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಕೆಲವರಿಗೆ ಇನ್ನೂ ನೀಡಲು ಸಾಧ್ಯವಾಗಿಲ್ಲ. ಕೊಳಚೆ ಪ್ರದೇಶ ಹೊರತುಪಡಿಸಿ ಸರ್ಕಾರಿ ಜಾಗಗಳಲ್ಲಿ ಮನೆ ನಿರ್ಮಿಸಿಕೊಂಡಿರುವವರಿಗೆ 94ಸಿ ಯೋಜನೆಯಡಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 94ಸಿಸಿ ಯೋಜನೆಯಡಿ ಹಕ್ಕು ಪತ್ರ ನೀಡಲಾಗುವುದು. ಈ ಸಂಬಂಧ ಸರ್ವೆ ಮಾಡಿ ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರ ವ್ಯಾಪ್ತಿಯಲ್ಲಿ ಆಶಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಖಾಲಿ ಜಾಗ ಗುರುತಿಸುವಲ್ಲಿ ತಹಸೀಲ್ದಾರ್ ಕಚೇರಿ ಅಧಿಕಾರಿಗಳು ನಿರ್ಲಕ್ಷ್ಯತನ ವಹಿಸುತ್ತಿರುವುದು ಸರಿಯಲ್ಲ. ಹಲವಾರು ಬಾರಿ ಸಭೆಯಲ್ಲಿ ಈ ಕುರಿತು ಸೂಚಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಜಾಗ ಗುರುತಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಸಿದರು.

ಉಪತಹಸೀಲ್ದಾರ್ ಮಲ್ಲಿಕಾರ್ಜುನಯ್ಯ ಹಾಗೂ ಕಂದಾಯಾಧಿಕಾರಿ ಪ್ರಶಾಂತ್ ಜಾಗ ಗುರುತಿಸುವಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಸಭೆ ಗಮನಕ್ಕೆ ತಂದರೂ ಸಹ ಸಭೆಯಲ್ಲಿ ಪಾಲ್ಗೊಂಡಿದ್ದ ನಗರಸಭಾ ಸದಸ್ಯರು ಸಹ ಸಮಾಧಾನಗೊಳ್ಳದೆ ಅಸಮಾಧಾನ ವ್ಯಕ್ತಪಡಿಸಿದರು.

ನಗರಸಭೆ ವತಿಯಿಂದ ನಿರ್ಮಾಣ ಮಾಡಲಾಗುತ್ತಿರುವ 4000 ಗುಂಪು ಮನೆಗಳಿಗೆ 4400 ಅರ್ಜಿಗಳು ಬಂದಿದ್ದು, ಈ ಪೈಕಿ 2050 ಅರ್ಜಿದಾರರು ಆಯ್ಕೆಯಾಗಿ ಶುಲ್ಕ ಪಾವತಿಸಿದ್ದಾರೆ. ಇವರು ಬ್ಯಾಂಕಿನವರೊಂದಿಗೆ ಚರ್ಚಿಸಿ ಮುಂದಿನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದರು.

ಉಳಿದಂತೆ 1950 ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಈ ನಡುವೆ ಈ ಹಿಂದೆ ಅರ್ಜಿ ಸಲ್ಲಿಸದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ತಕ್ಷಣ ಎಲ್ಲೆಡೆ ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳುವಂತೆ ಶಾಸಕರು ಪೌರಾಯುಕ್ತರಿಗೆ ಸೂಚಿಸಿದರು.

ಸಭೆಯಲ್ಲಿ ಪೌರಾಯುಕ್ತ ಕೆ. ಪರಮೇಶ್, ಇಂಜಿನಿಯರ್ ಪ್ರಸನ್ನಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ನಗರಸಭೆ ಇಂಜಿನಿಯರ್ ರಂಗರಾಜಪುರೆ, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಬಿ.ಕೆ ಮೋಹನ್‌ಕುಮಾರ್, ವಿ. ಕದಿರೇಶ್, ಟಿಪ್ಪುಸುಲ್ತಾನ್, ಸುದೀಪ್‌ಕುಮಾರ್, ಮಣಿ, ಚನ್ನಪ್ಪ, ಜಯಶೀಲ, ಲತಾ ಚಂದ್ರಶೇಖರ್, ಉದಯ್‌ಕುಮಾರ್, ಕಾಂತರಾಜ್, ಜಾರ್ಜ್, ಆರ್. ಮೋಹನ್‌ಕುಮಾರ್, ರಾಜ್‌ಕುಮಾರ್, ಗಂಗಾಧರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA SangameshwarNews in KannadaNews KannadaShimogaShivamoggaShivamogga Newsಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಉಚಿತ ಲಸಿಕೆ ಅಭಿಯಾನ

Next Post

ಗಮನಿಸಿ: ಜುಲೈ 10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 10ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL