ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೇನಗರದ ಎನ್’ಎಸ್’ಟಿ ರಸ್ತೆಯ ನಿವಾಸಿ ರಾಜಲಕ್ಷ್ಮೀ(90) ಅವರು ಸೋಮವಾರ ರಾತ್ರಿ ವಿಧಿವಶರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮೃತರು ಪುತ್ರ ಗೋವಿಂದರಾಜು, ಮೂವರು ಪುತ್ರಿಯರು, ಕುಟುಂಬಸ್ಥರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಮಂಗಳವಾರ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ರಾಜಲಕ್ಷ್ಮೀ ಅವರ ನಿಧನಕ್ಕೆ ಚಿನ್ನಬೆಳ್ಳಿ ವರ್ತಕರು ಸೇರಿದಂತೆ ನಗರದ ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post