ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು H D Kumaraswamy ಬೆಂಬಲ ಸೂಚಿಸಿ ಫೆಬ್ರವರಿ 3ರ ಗುರುವಾರ 3 ಗಂಟೆಗೆ ವಿಐಎಸ್‌ಎಲ್ ಕಾರ್ಖಾನೆ ಮುಂಭಾಗ ಆಗಮಿಸುವರು ಎಂದು ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ ತಿಳಿಸಿದ್ದಾರೆ.
ಈ ಹೋರಾಟಕ್ಕೆ ಕಾರ್ಮಿಕ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಪಕ್ಷದ ನಾಯಕರು, ಚುನಾಯಿತ ಪ್ರತಿನಿಧಿಗಳು ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post