ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಂಗಕರ್ಮಿ-ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್‌ರವರ ನಾ ಕಂಡ ಪೌರಾಯುಕ್ತರು ಅಭಿನಂದನಾ ಕೃತಿ ಬಿಡುಗಡೆ ಸಮಾರಂಭ ಮಾ.27ರಂದು ಬೆಳಿಗ್ಗೆ 11 ಗಂಟೆಗೆ ಸಿದ್ದರೂಢ ನಗರದ ಶಂಕರಮಠದಲ್ಲಿ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ MLA B K Sangameshwar ಪುಸ್ತಕ ಬಿಡುಗಡೆಗೊಳಿಸಲಿದ್ದು, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಕೃತಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.
Also read: ಲೇಔಟ್ ದಂಧೆ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ
ಮಿಸ್ ಸುಪ್ರ ನ್ಯಾಷನಲ್ 2014 ವಿಜೇತೆ, ಚಲನಚಿತ್ರ ನಟಿ ಆಶಾಭಟ್, ನಟ, ನಿರ್ದೇಶಕ ಎಂ.ಡಿ ಕೌಶಿಕ್, ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಡಾ. ವಿ. ಸುದೇಶ್, ಚಿಕ್ಕಮಗಳೂರು ಯೋಜನಾ ನಿರ್ದೇಶಕ ಮನೋಹರ್, ಶೃಂಗೇರಿ ಶಂಕರಮಠ ಧರ್ಮದರ್ಶಿ ಕೆ.ಆರ್. ಸುಬ್ಬರಾವ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಮತ್ತು ಅಪರಂಜಿ ಶಿವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post