ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಕೊರತೆಯನ್ನು ನೀಗಿಸಲು ನಗರದ ವಿಐಎಸ್’ಎಲ್ ಕಾರ್ಖಾನೆಯಲ್ಲಿ ಉತ್ಪಾದನೆಯನ್ನು ಆರಂಭಿಸಲಾಗಿದೆ.
ವಿಐಎಸ್’ಎಲ್ ಕಾರ್ಖಾನೆಯಲ್ಲಿ ಎಂಎಸ್’ಪಿಎಲ್ ಸಂಸ್ಥೆಯ ಸಹಯೋಗದಲ್ಲಿ ಇರುವ ಆಕ್ಸಿಜನ್ ಘಟಕದಿಂದ ಶುಕ್ರವಾರ ಆಕ್ಸಿಜನ್ ಉತ್ಪಾದನೆ ಆರಂಭಗೊಂಡಿದ್ದು, ಮೊದಲ ದಿನ 150 ಜಂಬೋ ಸಿಲಿಂಡರ್’ಗಳನ್ನು ತುಂಬಿಸಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ತಹಶೀಲ್ದಾರ್ ಸಂತೋಷ್ ಕುಮಾರ್, ವಿಐಎಸ್‌ಎಲ್ ಕಾರ್ಖಾನೆಯಲ್ಲಿರುವ ಆಕ್ಸಿಜನ್ ಉತ್ಪಾದನ ಘಟಕದಲ್ಲಿ ಉತ್ಪಾದನೆಯಗುವ ಆಕ್ಸಿಜನ್ ಸಿಲಿಂಡರ್‌ಗಳಲ್ಲಿ ತುಂಬಿಸಲಾಗಿದೆ. ಅದನ್ನು ಕೃಷಿ ಇಲಾಖೆ ಜಾಯಿಂಟ್ ಡೈರೆಕ್ಟರ್ ಅವರ ವಶಕ್ಕೆ ಒಪ್ಪಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಆಕ್ಸಿಜನ್ ತುಂಬಿಸಲ್ಪಟ್ಟ 150 ಜಂಬೂ ಸಿಲಿಂಡರ್‌ಗಳನ್ನು ಅವರಿಗೆ ಕಳುಹಿಸಿ ಕೊಡಲಾಗಿದ್ದು, ಅವರು ಅದನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ವಿಲೆ ಮಾಡುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post