ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕವನ್ನು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಹೊರತಂದಿದ್ದಾರೆ.
ಚಲನಚಿತ್ರ ನಟ, ನಿರ್ದೇಶಕ, ಪರಿಸರವಾದಿ ಸುರೇಶ್ ಹೆಬ್ಳಿಕರ್ ಪುಸ್ತಕ ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುಸ್ತಕ ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿಗೆ ಮೊ: 8861495610 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಪರಿಸರ ರಾಜ್ಯ ಪ್ರಶಸ್ತಿ ಮತ್ತು ಬಯಲಾಟ ಆಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಪರಿಸರ ಶಿವರಾಮ್, ಉಕ್ಕಿನ ನಗರದ ಜನತೆಗೆ ಬಹುತೇಕ ಚಿರಪರಿಚಿತರಾಗಿದ್ದಾರೆ. ಇವರ ಆತ್ಮಕಥೆಯನ್ನು ಭದ್ರಾವತಿ ರಾಮಾಚಾರಿಯವರು ಅದ್ಭುತವಾಗಿ ಹೊರತಂದಿದ್ದು, ಪರಿಸರ ಶಿವರಾಮ್ ಅವರ ಜೀವನದ ನೈಜತೆಯನ್ನು ಓದುಗರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post