ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರಧಾನಿ ನರೇಂದ್ರ ಮೋದಿ ಅವರ ಕಠಿಣ ಕ್ರಮದಿಂದಾಗಿ ದೇಶದಲ್ಲಿ ಇಂದು ಬಹಳಷ್ಟು ಶಾಂತಿ ನೆಲೆಸಿದ್ದು, ಅಹಿತಕರ ಘಟನೆಗಳು ಕಡಿಮೆಯಾಗಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಭದ್ರಾವತಿಯ ರ‍್ಯಾಪಿಡ್ ಆಕ್ಷನ್ ಫೋರ್ಸ್ ಘಟಕಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಳೆದ 9 ವರ್ಷಗಳ ಆಡಳಿತಾವಧಿಯಲ್ಲಿ ದೇಶಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಸಾಕಷ್ಟು ಯೋಜನೆಗಳು ಪ್ರಗತಿಯಲ್ಲಿದ್ದು, ಭವಿಷ್ಯದಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ಉದ್ದೇಶದಿಂದ ವಿಕಾಸ ತೀರ್ಥ ಯಾತ್ತೆ ಕೈಗೊಳ್ಳಲಾಗುತ್ತಿದೆ ಎಂದರು.
ಭದ್ರಾವತಿ ತಾಲೂಕಿನಲ್ಲಿ 97 ಬಿಎನ್ ಆರ್’ಎಎಫ್ ಘಟಕ ಹಾಗೂ ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿವೆ. ಅಲ್ಲದೆ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಇದೇ ವೇಳೆ ಸಂಸದರು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು.



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















