ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹೊರ ರಾಜ್ಯಗಳಲ್ಲಿ ಕಳ್ಳತನ ಮಾಡಿದ ಮೊಬೈಲ್‌ಗಳನ್ನು ನಗರದಲ್ಲಿ ಮಾರಾಟ ಮಾಡುತ್ತಿದ್ದ ಅಡ್ಡೆಯೊಂದರ ಮೇಲೆ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.
ಅನ್ವರ್ ಕಾಲೋನಿ ನಿವಾಸಿ ಸಯ್ಯದ್ ಅಲ್ವಿ (25) ಬಂಧಿತ ಯುವಕನಾಗಿದ್ದು, ಒಟ್ಟು 6,68,400 ರೂ. ಮೌಲ್ಯದ ವಿವಿಧ ಕಂಪನಿಗಳ ಒಟ್ಟು 55 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರದ ವಿವಿಧೆಡೆ ಮೊಬೈಲ್‌ಗಳನ್ನು ಕದ್ದು ತಂದು ನಗರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧಾರದ ಮೇರೆಗೆ ಹೊಸಮನೆ ಸಂತೆ ಮೈದಾನದಲ್ಲಿ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರ ಪೈಕಿ ಇಬ್ಬರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಪೊಲೀಸ್ ಉಪಾಧೀಕ್ಷಕ ಗಜಾನನ ಸುತಾರಾ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಶಾಂತಲಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಮೌನೇಶ್, ಮಂಜುನಾಥ್, ರಾಜು, ಕಲ್ಲೇಶ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post