ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗುಡ್ಡದ ನೇರಳೆಕೆರೆ ಗ್ರಾಮದ ಹೊರಭಾಗದಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಿಂದ ದರೋಡೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈ ಭಾಗದಲ್ಲಿ ದರೋಡೆಗೆ ಹೊಂಚು ಹಾಕಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ 3 ಆಟಿಕೆ ಏರ್ ಪಿಸ್ತೂಲು, 1 ಮಚ್ಚು ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್’ಪಿ ಸುಧಾಕರ ನಾಯಕ್ ಹಾಗೂ ಗ್ರಾಮಾಂತರ ಸಿಪಿಐ ಈ.ಒ. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಪಿಎಸ್’ಐ ದೇವರಾಜ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.
Get in Touch With Us info@kalpa.news Whatsapp: 9481252093
 
	    	

 Loading ...
 Loading ... 
							



 
                
Discussion about this post