ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಮಿಲಿಟರಿ ಕ್ಯಾಂಪ್ ಬಳಿ ಇರುವ ಪೊಲೀಸ್ ವಸತಿ ಸಮುಚ್ಚಯದ ಪಕ್ಕದಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿದ ಪೊಲೀಸ್ ಕವಾಯತು ಮೈದಾನವನ್ನು ಬುಧವಾರ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಗೆ ದೈಹಿಕ ಕ್ಷಮತೆಯ ಜೊತೆಗೆ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

Also read: Indian Railways | NDMA ರಾಷ್ಟ್ರೀಯ ಸಮಾವೇಶ | ವಿಪತ್ತು ನಿರ್ವಹಣೆಗೆ ಒತ್ತು
ಇದಕ್ಕೂ ಮುನ್ನ ಐಜಿಪಿ ಅವರು ಡಿವೈಎಸ್‌ಪಿ ಕಅಚೇರಿಯಲ್ಲಿ ಸಭೆ ನಡೆಸಿ ದಾಖಲಾತಿ ಹಾಗೂ ಕಡತ ನಿರ್ವಹಣೆ ಮತ್ತು ಇತರೆ ಪ್ರಮುಖ ವಿಷಯಗಳನ್ನು ಪರಿಶೀಲಿಸಿ, ಅಧಿಕಾರಿಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ, ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









