ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಸೆಕ್ಷನ್ ಜಾರಿಯಲ್ಲಿರುವ ಬೆನ್ನಲ್ಲೇ ಎಡಿಜಿಪಿ ಅಲೋಕ್ ಕುಮಾರ್ ADGP Alok Kumar ನೇತೃತ್ವದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಯಿತು.
ರಂಗಪ್ಪ ವೃತ್ತದಿಂದ ಆರಂಭಗೊಂಡ ನಗರದ ಪ್ರಮುಖ ರಸ್ತೆ ಹಾಗೂ ಬಡಾವಣೆಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಆರಂಭಗೊಂಡ ರೂಟ್ ಮಾರ್ಚ್‌ನಲ್ಲಿ ಮೂರು ರ‍್ಯಾಪಿಡ್ ಆಕ್ಷನ್ ಫೋರ್ಸ್, ಮೂರು ಕೆಎಸ್’ಆರ್’ಪಿ ಪ್ಲಟೂನ್ಸ್, ನಾಗರೀಕ ಪೊಲೀಸ್ ಸೇವಾ ದಳ ಸೇರಿ 200ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ರಂಗಪ್ಪ ವೃತ್ತ, ಹಳೇ ಸಂತೇ ಮೈದಾನ ರಸ್ತೆ, ಗಾಂಧಿ ವೃತ್ತ, ಮಾಧವಾಚಾರ್ ವೃತ್ತ ಭೂತನಗುಡಿ, ಹೊಸಮನೆ, ಹೊಳೆಹೊನ್ನೂರು ರಸ್ತೆ, ಅನ್ವರ್ ಕಾಲೋನಿ ಸೇರಿದಂತೆ ಪ್ರಮುಖ ರಸ್ತೆ ಹಾಗೂ ಬಡಾವಣೆಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಎಡಿಜಿಪಿ ಅಲೋಕ್ ಕುಮಾರ್, ಐಜಿಜಿ ತ್ಯಾಗರಾಜನ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್, ಎಎಸ್’ಪಿ ವಿಕ್ರಮ್, ಕಾರ್ತಿಕ್ ರೆಡ್ಡಿ, ತಹಶೀಲ್ದಾರ್ ಪ್ರದೀಪ್ ನಿಕ್ಕಂ, ನಗರಸಭೆ ಆಯುಕ್ತ ಮನು ಕುಮಾರ್, ಡಿವೈಎಸ್’ಪಿ ಜಿತೇಂದ್ರ ಕುಮಾರ್, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಗ್ರಾಮಾಂತರ ಠಾಣಾ ಪಿಐ ಗುರುರಾಜ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.











Discussion about this post