ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಭದ್ರಾವತಿ (Bhadravathi) ನಗರದಲ್ಲಿ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮೆರವಣಿಗೆ ಸಾಗುವ ಮಾರ್ಗದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Bhadravathi : ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರಮುಖ ಪ್ರದೇಶಗಳು:
- ಲೋಯರ್ ಹುತ್ತಾ
- ಬಿ.ಎಚ್. ರಸ್ತೆ
- ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ರಸ್ತೆ
- ಹಾಲಪ್ಪ ವೃತ್ತ
- ಚಾಮೇಗೌಡ ಬೀದಿ
- ರಂಗಪ್ಪ ವೃತ್ತ
- ಹೊಳೆಹೊನ್ನೂರು ರಸ್ತೆ
- ಟಿಪ್ಪು ವೃತ್ತ
- ಚೆನ್ನಗಿರಿ ರಸ್ತೆ
- ಮಾಧವಾಚಾರ್ ವೃತ್ತ
- ತರೀಕೆರೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು
Also Read>> ‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ
ಈ ಪ್ರದೇಶಗಳಲ್ಲಿ ನಿಗದಿತ ಅವಧಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿರುವುದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಮನವಿ ಮಾಡಿದ್ದಾರೆ.
ವಿದ್ಯುತ್ ಬಳಕೆಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳುವಂತೆ ಮೆಸ್ಕಾಂ ಅಧಿಕಾರಿಗಳು ಗ್ರಾಹಕರಿಗೆ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










