ಭದ್ರಾವತಿ: ವಿದ್ಯಾರ್ಥಿಗಳಿಗೆ ತಮ್ಮಲ್ಲಿನ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ರಾಜಶೇಖರ್ ಹೇಳಿದರು.
ಶನಿವಾರ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಪದನಿಮಿತ್ತ ಬ್ಲಾಕ್ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಮತ್ತು ಸರ್ವ ಶಿಕ್ಷಣ ಅಭಿಯಾನ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೊಮ್ಮನಕಟ್ಟೆ ನಗರ-1 ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಚಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಹಂತದಲ್ಲಿ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಆಯೋಜಿಸಿಕೊಂಡು ಬರುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಭಾರತಿ, ತಾಲೂಕು ಅಧ್ಯಕ್ಷ ಎಂ.ಎಸ್. ಬಸವರಾಜ್ ಮತ್ತು ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳ ಜಿಲ್ಲಾಧ್ಯಕ್ಷ ಎಂ. ದೇವೇಂದ್ರಪ್ಪ ಮಾತನಾಡಿದರು.
ಶಿಕ್ಷಣ ಸಂಯೋಜಕ ಎಸ್.ಕೆ. ರವಿಕುಮಾರ್, ಪ್ರಾಂಶುಪಾಲ ಶಾಮರಾಯ ಆಚಾರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಜಿ.ಪಿ. ಪರಮೇಶ್ವರಪ್ಪ ಸ್ವಾಗತಿಸಿ, ಸಹ ಶಿಕ್ಷಕಿ ವಿಜಯಲಕ್ಷ್ಮಿ, ಸಮೂಹ ಸಂಪನ್ಮೂಲ ವ್ಯಕ್ತಿ ಚನ್ನಪ್ಪ ವಂದಿಸಿದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

















