ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕ ಶಿಕ್ಷಕಿಗೆ ಗೌರವ ಸಮರ್ಪಣೆ ಮಾಡಲಾಯಿತು.
ವೀರಶೈವ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಆರ್.ಎಸ್. ಕೀರ್ತಿಮಾಲ ಅವರಿಗೆ ಗೌರವ ಸಮರ್ಪಣೆ ಮಾಡಲಾಯಿತು. 10ನೆಯ ತರಗತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಎಸ್. ಅಡವೀಶಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಆರ್.ಎಸ್. ಶೋಭಾ ಅಧ್ಯಕ್ಷತೆ ವಹಿಸಿದ್ದರು. ನಾಗರತ್ನ ವಾಗೀಶ್ ಕೋಠಿ ಪ್ರಾಸ್ತಾವಿಕ ನುಡಿಗಳನ್ನಾಡಿ, ನಾಗರತ್ನ ಮಲ್ಲಿಕಾರ್ಜುನ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯP್ಷÀರಾದ ವೇದ ಶಿವಮೂರ್ತಿ, ನಿರ್ದೇಶಕರಾದ ಸುನಂದ ಬಸವರಾಜಯ್ಯ ಉಪಸ್ಥಿತರಿದ್ದರು.
Also read: ಭಾರೀ ಮಳೆಗೆ ನಾಶವಾದ ಮುದ್ದೆಬಿಹಾಳದ ರೈತನ ಬದುಕು: ಮೂರು ಎಕರೆ ಮೆಕ್ಕೆ ಜೋಳ ನೀರುಪಾಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post